ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆಯ ವೀಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು.
ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.
ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ, ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
BIG NEWS: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್