ಮಂಡ್ಯ: ಜಿಲ್ಲೆಯಲ್ಲಿ ಮನಕಲಕುವ ಘಟನೆ ಎನ್ನುವಂತೆ ಮಗ ಸಾವನ್ನಪ್ಪಿರುವಂತ ಸುದ್ದಿಯನ್ನು ಕೇಳಿದಂತ ತಾಯಿ ಕೂಡ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಮಂಡ್ಯದ ಮೆಟ್ಕಲ್ ಗ್ರಾಮದ ಕೃಷ್ಣಮೂರ್ತಿ(20) ಎಂಬಾತ ಅಪಘಾತದಲ್ಲಿ ಸಾವನ್ನಪ್ಪಿದ್ದನು. ಈ ವಿಷಯ ತಿಳಿದಂತ ಆತನ ತಾಯಿ ಮಹದೇವಮ್ಮ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಡಿ.21ರಂದು ಈ ಘಟನೆ ನಡೆದಿದೆ. ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಕೃಷ್ಣಮೂರ್ತಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ವಿಷಯನ್ನು ಗ್ರಾಮಸ್ಥರು ಆತನ ತಾಯಿ ಮಹದೇವಮ್ಮಗೆ ತಿಳಿಸಿದ್ದರು. ಈ ವಿಷಯ ತಿಳಿದು ಆಘಾತಗೊಂಡ ಅವರು ಸಾವನ್ನಪ್ಪಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಇ-ಖಾತಾ’ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ