ನವದೆಹಲಿ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನ ಭಾರತದಿಂದ ವಾಪಸ್ ಕಳುಹಿಸುವಂತೆ ಬಾಂಗ್ಲಾದೇಶ ಅಧಿಕೃತವಾಗಿ ಮನವಿ ಮಾಡಿದೆ. ಬಾಂಗ್ಲಾದೇಶದ ಗೃಹ ವ್ಯವಹಾರಗಳ ಸಲಹೆಗಾರ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಜಹಾಂಗೀರ್ ಆಲಂ ಚೌಧರಿ ಸೋಮವಾರ ಅವ್ರನ್ನ ಹಸ್ತಾಂತರಿಸಲು ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಔಪಚಾರಿಕ ಪತ್ರವನ್ನ ಕಳುಹಿಸಲಾಗಿದೆ ಎಂದು ದೃಢಪಡಿಸಿದರು.
ಢಾಕಾದ ಪಿಲ್ಖಾನಾದಲ್ಲಿರುವ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (BGB) ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಹಾಂಗೀರ್ ಆಲಂ, “ಈಗಾಗಲೇ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಕಳುಹಿಸಲಾಗಿದೆ. ಹಸ್ತಾಂತರಕ್ಕಾಗಿ ಪ್ರಕ್ರಿಯೆ ನಡೆಯುತ್ತಿದೆ” ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ಬಾಂಗ್ಲಾದೇಶ ಮತ್ತು ಭಾರತದ ನಡುವೆ ಅಸ್ತಿತ್ವದಲ್ಲಿರುವ ಕೈದಿಗಳ ವಿನಿಮಯ ಒಪ್ಪಂದದ ಅಡಿಯಲ್ಲಿ ಈ ಕಾರ್ಯವಿಧಾನವನ್ನ ನಡೆಸಲಾಗುವುದು ಎಂದು ಅವರು ವಿವರಿಸಿದರು.
GOOD NEWS: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೆ ದ್ವಿತೀಯ PUC ಪರೀಕ್ಷೆ-1ಕ್ಕೆ ನೋಂದಣಿಗೆ ಅವಧಿ ವಿಸ್ತರಣೆ
BREAKING : ಮಾಜಿ ಕ್ರಿಕೆಟಿಗ ‘ವಿನೋದ್ ಕಾಂಬ್ಳಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Vinod Kambli