ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆ ನಡೆಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ.
• ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 9 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್ ಮ್ಯಾನುಫಾಕ್ಚರಿಂಗ್ ಕ್ಲಸ್ಟರ್ ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚನೆ ನೀಡಿದರು.
• ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು.
• ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.
BIG NEWS: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್