ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ 40 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಹಲವು ರೌಡಿಗಳ ಮನೆಗಳ ಮನೆಯಲ್ಲಿ ಮಚ್ಚು, ಲಾಂಗ್ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ.
ಪರಪ್ಪನ ಅಗ್ರಹಾರ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮನೆಗಳ ಪರಿಶೀಲನೆ ವೇಳೆ ರೌಡಿಶೀಟರ್ ಕುಳ್ಳ ಶಿವರಾಜ್ ಮನೆಯಲ್ಲಿ 10 ಕ್ಕೂ ಹೆಚ್ಚು ಮಚ್ಚು, ಲಾಂಗ್ ಗಳು ಪತ್ತೆಯಾಗಿವೆ.