ಬೆಂಗಳೂರು : ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು ಈ ಸಂಘದ ಸದಸ್ಯತ್ವ ಶುಲ್ಕವನ್ನು ಕಟಾವಣೆ ಮಾಡುವ ಕುರಿತು ಶಿಕ್ಷಣ ಇಲಾಖೆ
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು ಈ ಸಂಘದ ಸದಸ್ಯತ್ವ ಶುಲ್ಕವನ್ನು ಸರ್ಕಾರದ ಉಲ್ಲೇಖ-1 ಮತ್ತು 2ರ ಆದೇಶಗಳಲ್ಲಿ ತಿಳಿಸಿರುವಂತೆ 2024-25ನೇ ಸಾಲಿಗೆ 2024ರ ಡಿಸೆಂಬರ್ ತಿಂಗಳ ವೇತನದಿಂದ ಹಾಗೂ ಮುಂಬರುವ ವರ್ಷಗಳಲ್ಲಿ ಪ್ರತಿ ಏಪ್ರಿಲ್ ತಿಂಗಳ ವೇತನದಿಂದ ಕಟಾವಣೆ ಮಾಡಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ತಿಳಿಸಲಾಗಿದೆ ಹಾಗೂ ಸಂಬಂಧಿಸಿದ ಇಲಾಖೆಗಳ ಎಲ್ಲಾ ಅಧಿಕಾರಿಗಳನ್ನು ಕೋರಲಾಗಿದೆ. (ಪತಿಗಳನ್ನು ಲಗತ್ತಿಸಿದೆ)