ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ಕೇವಲ 5 ರೂ. ಕುರ್ ಕುರೆ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, 10 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಹೊನ್ನೇಬಾಗಿ ಗ್ರಾಮದಲ್ಲಿ ಕುರ್ ಕುರೆ ಪ್ಯಾಕೇಟ್ ವಿಚಾರಕ್ಕೆ ಅತೀಫ್ ಉಲ್ಲಾ ಹಾಗೂ ಸದ್ದಾಂ ಕುಟುಂಬದ ನಡುವೆ ಗಲಾಟೆಯಾಗಿದ್ದು, ಎರಡೂ ಕುಟುಂಬಗಳ ಸದಸ್ಯರು ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಅತೀಫ್ ಉಲ್ಲಾ ಹೊನ್ನೇಬಾಗಿ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ. ಸದ್ದಾಂ ಕುಟುಂಬದ ಮಕ್ಕಳು ಅಂಗಡಿಯಲ್ಲಿ ಕುರ್ ಕುರೆ ಖರೀದಿ ಮಾಡಿದ್ದಾರೆ. ಆದರೆ ಕುರ್ ಕುರೆ ಅವಧಿ ಮುಗಿದಿದೆ. ಬೇರೆಯದನ್ನು ಕೊಡು ಎಂದು ಕೇಳಿದಕ್ಕೆ ಗಲಾಟೆ ಶುರುವಾಗಿದ್ದು, ಘಟನೆ ಸಂಬಂಧ ಸದ್ದಾಂ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಳಿಕ ಅತೀಫ್ ಕುಟುಂಬಸ್ಥರು ಸದ್ದಾಂ ಕುಟುಂಬದರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಹಲ್ಲೆ ಮಾಡುವ ಸಂದರ್ಭದಲ್ಲಿ ಬಿಡಿಸಲು ಬಂದವರ ಮೇಲೆಯೂ ಹಲ್ಲೆ ನಡೆಸಿದ್ದು, ಗಾಯಗೊಂಡವರನ್ನು ಚನ್ನಗಿರಿ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.