ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಗಾರ್ಮೆಂಟ್ ಬಸ್ ಹರಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಳ ಹೆಗ್ಗಡದೇವನಪುರ ಬಳಿ ಗೋಲ್ಡನ್ ಸೀಮ್ಸ್ ಇಂಡಸ್ಟ್ರೀಸ್ ಪ್ರೈ.ಲಿ. ಕಂಪನಿಯ ಬಸ್ ಹರಿದ ಪರಿಣಾಮ ಕಂಪಿನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ನಳಿನಾ (28) ಎಂದು ಗುರುತಿಸಲಾಗಿದೆ.
ನಳಿನಾ ಕಳೆದ 2 ವರ್ಷಗಳಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಳಿನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.