ಬೆಂಗಳೂರು: ನಗರದಲ್ಲಿ ಹಾಡಹಗಲೇ ಹೋಟೆಲ್ ಮಾಲೀಕರೊಬ್ಬರ ಮೇಲೆ ದುಷ್ಕರ್ಮಿಗಳಿಂದ ಡೆಡ್ಲಿ ಅಟ್ಯಾಕ್ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹೋಟೆಲ್ ಮಾಲೀಕನ ಮೇಲೆ ದಾಳಿ ಮಾಡಿದ್ದು, ಕೈಕಾಲು ಕತ್ತರಿಸಿ ಪರಾರಿಯಾಗಿರುವಂತ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾದರಹಳ್ಳಿ ಗೇಟ್ ಬಳಿಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಹೋಟೆಲ್ ಮಾಲೀಕ ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಮಚ್ಚಿನಿಂದ ಹಲ್ಲೆ ಮಾಡಿದ ಪರಿಣಾಮ ಹೋಟೆಲ್ ಮಾಲೀಕ ಮಂಜುನಾಥ್ ಒಂದು ಕೈ ಕಟ್ ಆಗಿರುವುದಾಗಿ ತಿಳಿದು ಬಂದಿದೆ. ಕೆಳಗೆ ಬಿದ್ದಂತ ಮಂಜುನಾಥ್ ಮೇಲೆ ಮನಸೋಇಚ್ಛೆ ದುಷ್ಕರ್ಮಿಗಳು ಹಲ್ಲೆ ಮಾಡಿರುವುದಾಗಿ ಹೇಳಲಾಗುತ್ತಿದೆ.
ದುಷ್ಕರ್ಮಿಗಳ ದಿಢೀರ್ ದಾಳಿಯಿಂದಾಗಿ ಹೋಟೆಲ್ ಸಿಬ್ಬಂದಿ, ಗ್ರಾಹಕರೇ ಬೆಚ್ಚಿ ಬಿದ್ದಿದ್ದಾರೆ. ಗಾಯಾಳು ಮಂಜುನಾಥ್ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಚಿಕ್ಕಜಾಲ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ
ವಿವಸ್ತ್ರಗೊಳಿಸಿ, ಥಳಿಸಿ, ಮೂತ್ರ ವಿಸರ್ಜನೆ: ದಲಿತ ಯುವಕ ಆತ್ಮಹತ್ಯೆ | Dalit Teen