ಶಿವಮೊಗ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆ ಎಸ್‌ಸಿಎಸ್‌ಪಿ/ಟಿಎಎಸ್‌ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಸಿದಂತೆ ಸಣ್ಣ ಮತ್ತು ಅತಿಸಣ್ಣ (ಎಸ್‌ಎಂಇ) ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಅಹ್ವಾನಿಸಿದೆ.
ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ‍್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಡಿ. 31 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223405 ನ್ನು ಸಂಪರ್ಕಿಸುವುದು.
ಕೆಲವೇ ಕ್ಷಣದಲ್ಲಿ ಅಮೇರಿಕಾದಲ್ಲಿ ‘ನಟ ಶಿವರಾಜ್ ಕುಮಾರ್’ಗೆ ಶಸ್ತ್ರ ಚಿಕಿತ್ಸೆ | Actor Shivarajkumar
BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ