ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಹಲವರು ಯೋಧರು ಗಾಯಗೊಂಡಿದ್ದರು. ಇವರಲ್ಲಿ ಐವರು ಯೋಧರು ಹುತಾತ್ಮರಾಗಿರುವುದಾಗಿ ತಿಳಿದು ಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದಿದೆ. ಅನೇಕ ಜವಾನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ ನಾಲ್ಕು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
Jammu and Kashmir | 5 soldiers lost their lives after an army vehicle met with an accident in the Poonch sector.
Rescue operations are ongoing, and the injured personnel are receiving medical care: White Knight Corps pic.twitter.com/Ky4499XbVF
— ANI (@ANI) December 24, 2024
ಹೊಸ ಖಾತೆದಾರರಿಗೆ ರೂ. 5,000 ಮೌಲ್ಯದ ರಿವಾರ್ಡ್ಸ್ ‘ಜಿಯೋ ಪೇಮೆಂಟ್ಸ್ ಬ್ಯಾಂಕ್’
BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ