ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (LoC) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದಿದೆ. ನಾಲ್ವರು ಸೈನಿಕರು ಹುತಾತ್ಮರಾಗಿದ್ದು, ಅನೇಕ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಪಡೆದ ಸೇನಾಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ.
ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇದೇ ರೀತಿಯ ಅಪಘಾತದಲ್ಲಿ, ಸೇನಾ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದರು ಮತ್ತು ಇನ್ನೊಬ್ಬರು ಗಾಯಗೊಂಡಿದ್ದರು. ನವೆಂಬರ್ 4 ರಂದು ಕಲಕೋಟ್‌ನ ಬಡೋಗ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ ನಾಯಕ್ ಬದ್ರಿ ಲಾಲ್ ಮತ್ತು ಕಾನ್‌ಸ್ಟೆಬಲ್ ಜೈ ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಹೊಸ ಖಾತೆದಾರರಿಗೆ ರೂ. 5,000 ಮೌಲ್ಯದ ರಿವಾರ್ಡ್ಸ್ ‘ಜಿಯೋ ಪೇಮೆಂಟ್ಸ್ ಬ್ಯಾಂಕ್’
BREAKING : ಜಮ್ಮು-ಕಾಶ್ಮೀರದಲ್ಲಿ ಕಮರಿಗೆ ಬಿದ್ದ ಸೇನಾ ವಾಹನ ; ಹಲವು ಯೋಧರಿಗೆ ಗಂಭೀರ ಗಾಯ |Army Vehicle Plunges