ಬಳ್ಳಾರಿ: ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಸಿರುಗುಪ್ಪ (ಕಂಪ್ಲಿ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾ.ಪಂ., ಪ.ಪಂ, ಪುರಸಭೆ, ನಗರಸಭೆ, ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 96 ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ 1ನೇ ಹಂತದಲ್ಲಿಯೇ ಅಪ್ಲಿಕೇಷನ್ ಸಕ್ಸಸ್‌ಪುಲ್ ಅಪ್‌ಲೋಡ್ ಎಂಬ ಮೆಸೇಜ್ ಅವರ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶದನ್ವಯ ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಡಿ.26 ರಿಂದ ಜ.05 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್ ವಿಳಾಸ : https://karnemakaone.kar.nic.in/adcd/ ಮೂಲಕ ಅವಕಾಶ ನೀಡಿ ಅದೇಶಿಸಲಾಗಿದೆ.
ಅಭ್ಯರ್ಥಿಗಳು ಮೊದಲನೇ ಹಂತ ಆನ್‌ಲೈನ್ ನಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು. 2ನೇ ಹಂತದಲ್ಲಿ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡಬೇಕು. 3ನೇ ಹಂತದಲ್ಲಿ ದಾಖಲಾತಿ ಅಪ್‌ಲೋಡ್ ಮಾಡಬೇಕು. 4ನೇ ಹಂತ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರಯೊಂದಿಗೆ ಅರ್ಜಿ ಪೂರ್ಣಗೊಳಿಸಬೇಕು.
ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 1181 ಅಪೂರ್ಣ ಅರ್ಜಿಗಳು ಹಾಗೂ ಸಹಾಯಕಿಯರ ಹುದ್ದೆಗೆ 893 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿವೆ. ಅಪೂರ್ಣವಾದ ಅರ್ಜಿದಾರರ ಹೆಸರನ್ನು ಆಯಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಲಭ್ಯವಿದ್ದು, ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ತೆಗೆದುಕೊಂಡು ಅರ್ಜಿಗಳನ್ನು ಪೂರ್ಣಗೊಳಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG UPDATE: ಜಮ್ಮು-ಕಾಶ್ಮೀರದಲ್ಲಿ ಕಂದಕ್ಕೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮ
BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ