ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ಸದನದಲ್ಲೇ ಅವಚ್ಯವಾಗಿ ನಿಂದಿಸಿದ್ದರು ಎನ್ನಲಾದ ಪ್ರಕರಣ ಹಾಗೂ ಸಚಿವರ ಸಹಚರರ ವಿರುದ್ಧ ಹಲ್ಲೆ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಪಿಎಸ್ ಐ ನೇಮಕಾತಿ ಹಗರಣದ ಸಾರಥ್ಯ ವಹಿಸಿದ್ದ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವನ್ನು ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ರಚಿಸಿದ್ದು, ಡಿವೈ ಎಸ್ಪಿ ಕೇಶವಮೂರ್ತಿ ಅವರನ್ನು ತನಿಖಾಧಿಕಾರಿಯಾಗಿ ನೇಮೀಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಬೆಳಗಾವಿ ಪೊಲೀಸರನ್ನು ಸಂಪರ್ಕಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದು, ಇಂದು ಬೆಳಗಾವಿಗೆ ಭೇಟಿ ನೀಡಿ ತನಿಖೆ ನಡೆಸಲಿದ್ದಾರೆ ಎನ್ನಲಾಗಿದೆ.