ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಗ್ನಿಅವಘಡ ಸಂಭವಿಸಿದ್ದು, ಸತತ 1 ಗಂಟೆಗೂ ಹೆಚ್ಚು ಕಾಲ ಸ್ಪಾ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿರುವ ಸ್ಪಾದಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸತತ 1 ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆಗೆ ಸ್ಪಾದಲ್ಲಿರುವ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಘಟನೆ ಕುರಿತು ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.