ಬೆಂಗಳೂರು ಕೇಂದ್ರ ಸರ್ಕಾರವು 5 ಮತ್ತು 8 ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆಯಲು ಜಾರಿಗೊಳಿಸಿರುವ ನಿಯಮವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸದಂತೆ ಶಿಕ್ಷಣ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಫಾಫ್ರೆ ಪ್ರಧಾನ ಸಂಚಾಲಕ ಹಾಗೂ ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ, ಯಪಿಎ ಜಾರಿಗೆ ಬಂದ ಆರ್ ಟಿ ನೀತಿ 8 ನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಒಂದೇ ತರಗತಿಯಲ್ಲಿ ತಡೆಹಿಡಿಯುವುದಾಗಲಿ, ಫೇಲ್ ಮಾಡವುದಾಗಲಿ ನಿಷೇಧಿಸಲಾಗಿತ್ತು.
ಮಕ್ಕಳನ್ನು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈಗ ಕೇಂದ್ರ ಸರ್ಕಾರದ ನೀತಿಯು ಆರ್ ಟಿ ಇ ಮೂಲ ಉದ್ದೇಶಕ್ಕೆ ವಿರುದ್ಧವಾಗುತ್ತದೆ. ಹಾಗಾಗಿ ರಾಜ್ಯ ಸರ್ಕಾರವು ಇದನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ.