ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ಹೌದು, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆಯಲಿದ್ದಾರೆ.
ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಅಂತ ದೂರವಾಣಿ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದಾರೆ. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದಾರೆ.