ಬೆಂಗಳೂರು : ಕ್ರಿಸ್‌ಮಸ್, ಹೊಸ ವರ್ಷಾಚರಣೆ ವೇಳೆ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.
ಕ್ರಿಸ್‌ಮಸ್, ಹೊಸ ವರ್ಷಾಚರಣೆ ವೇಳೆ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸೂಚನೆ
* ಮಾಲ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು
* ಪೊಲೀಸ್ ಸಿಬ್ಬಂದಿ ಹೆಲೈಟ್ ಹಾಗೂ ಲಾಠಿಯನ್ನು ಹೊಂದಿರಬೇಕು
. ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವರ್ ಅನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು
* ಹೆಣ್ಣು ಮಕ್ಕಳನ್ನು ಚುಡಾಯಿಸುವವರು ಹಾಗೂ ದಾಂಧಲೆ ನಡೆಸುವವರನ್ನು ಕೂಡಲೇ ವಶಕ್ಕೆ ಪಡೆದುಕೊಂಡು ಕ್ರಮ ತೆಗೆದುಕೊಳ್ಳಬೇಕು
* ರಸ್ತೆ ಮೇಲೆ ಬಾಟಲಿ ಒಡೆದು ದಾ೦ಧಲೆ ನಡೆಸುವವರನ್ನು ತಕ್ಷಣವೇ ವಶಕ್ಕೆ ಪಡೆದುಕೊಳ್ಳಬೇಕು
* ಹೆಚ್ಚಿನ ಜನರು ಜಮಾವಣೆ ಆಗುವ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಿರಬೇಕು
* ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಹಾಗೂ ಮಹಾತ್ಮಗಾಂಧಿ ರಸ್ತೆಯಲ್ಲಿ ಆಗಮನ ಹಾಗೂ ನಿರ್ಗಮನ ದ್ವಾರಗಳನ್ನು ಅಳವಡಿಸಬೇಕು
* ಗುಪ್ತದಳ ಅಧಿಕಾರಿಗಳ ಜೊತೆಗೆ ಪೊಲೀಸ್
* ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿ ಇರಬೇಕು
* ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು
* ಸಣ್ಣಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು
* ಹೊಸ ವರ್ಷ ಆಚರಿಸುವವರಿಗೆ ಅಡಚಣೆ ಮಾಡದೇ ಅವರಿಗೆ ಸುರಕ್ಷತೆ ನೀಡಬೇಕು
* ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು.