ಕಲಬುರಗಿ : ಶಾಲಾ ಬಸ್ಗೆ ಮಗುವನ್ನು ಹತ್ತಿಸುವಾಗ ವಿದ್ಯುತ್ ವೈಯರ್ ತಗುಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕರೆಂಟ್ ಶಾಕ್ನಿಂದ (Electric shock) ಗಂಭೀರವಾಗಿ ಗಾಯಗೊಂಡಿರುವ ಬಾಗ್ಯಶ್ರೀ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.
ಬಾಗ್ಯಶ್ರೀ ಅವರು ತಮ್ಮ ಬುದ್ಧಿಮಾಂದ್ಯ ಮಗನನ್ನ ಶಾಲೆಗೆ ಕಳುಹಿಸಲು ಶಾಲಾ ವಾಹನ ಹತ್ತಿಸಲು ಬಂದಿದ್ದರು. ಈ ವೇಳೆ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವೈರ್ ತಗುಲಿದ್ದು,ಶಾಕ್ ಹೊಡೆದು ಭಾಗ್ಯಶ್ರೀ ಅವರು ರಸ್ತೆಯಲ್ಲಿ ಬಿದ್ದು ವಿಲವಿಲ ಒದ್ದಾಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಭಾಗ್ಯಶ್ರೀ ಸಾವು-ಬದಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಭಾಗ್ಯಶ್ರೀ ಕುಟುಂಬಸ್ಥರು ಕಣ್ಣೀರು ಹಾಕುತ್ತಾ ಜೆಸ್ಕಾಂ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
Negligence Strikes Again: Kalaburagi Woman Critically Injured
1. Tragic Accident: A live wire fell on a school bus for children with intellectual disabilities near Mohan Lodge.
2. Woman Severely Burned: Bhagyashree suffered critical injuries while helping her child board the… pic.twitter.com/EHdNmbnLZu
— Sneha Mordani (@snehamordani) December 24, 2024