ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಡಿ.18 ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಮಲದ ಗುಂಡಿಗೆ ಇಳಿದಿದ್ದ ಕಾರ್ಮಿಕರೊಬ್ಬರು ಉಸಿರುಗಟ್ಟೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರನ್ನು ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಎಂದು ಗುರುತಿಸಲಾಗಿದ್ದು,ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.