ನವದೆಹಲಿ: ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ತಿಳಿಸಿದೆ
ಮೋದಿ ಸರ್ಕಾರದ ಕೊನೆಯ ಎರಡು ಅವಧಿಗಳಲ್ಲಿ ಸಚಿವರಾಗಿದ್ದ ಮಾಜಿ ಸೇನಾ ಮುಖ್ಯಸ್ಥ ವಿಜಯ್ ಕುಮಾರ್ ಸಿಂಗ್ ಅವರನ್ನು ಮಿಜೋರಾಂನ ಹೊಸ ರಾಜ್ಯಪಾಲರಾಗಿ ಹೆಸರಿಸಲಾಗಿದ್ದು, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರಕ್ಕೆ ವರ್ಗಾಯಿಸಲಾಗಿದೆ.
ಅಜಯ್ ಕುಮಾರ್ ಭಲ್ಲಾ ಯಾರು?
ಅತಿ ಹೆಚ್ಚು ಕಾಲ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿರುವ ಅಜಯ್ ಕುಮಾರ್ ಭಲ್ಲಾ ಅವರು ಈ ವರ್ಷದ ಆಗಸ್ಟ್ನಲ್ಲಿ ತಮ್ಮ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದರು. ಅವರು ಅಸ್ಸಾಂ-ಮೇಘಾಲಯ ಕೇಡರ್ನ 1984 ರ ಬ್ಯಾಚ್ನ ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಲ್ಲಾ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ಮಣಿಪುರದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಮಿಜೋರಾಂ ರಾಜ್ಯಪಾಲರಾಗಿ ನಿವೃತ್ತ ಜನರಲ್ ವಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.