ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕರೌಲಿ-ಗಂಗಾಪುರ ಹೆದ್ದಾರಿಯ ಸೇಲಂಪುರದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಕಾರು ಗಂಗಾಪುರದಿಂದ ಕರೌಲಿ ಕಡೆಗೆ ಹೋಗುತ್ತಿದ್ದಾಗ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರನ್ನು ಗುಜರಾತ್ ಮೂಲದವರೆಂದು ಗುರುತಿಸಲಾಗಿದೆ. ಇವರೆಲ್ಲರೂ ಮಧ್ಯಪ್ರದೇಶದ ಇಂದೋರ್‌ನಲ್ಲಿ ವಾಸಿಸುತ್ತಿದ್ದರು, ಆದರೆ ಈಗ ಅವರು ಗುಜರಾತ್‌ನ ವಡೋದರಾದಲ್ಲಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಪ್ರಾಥಮಿಕ ಅಂದಾಜಿಸಿದ್ದಾರೆ. ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.