ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸದ್ಯ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆ ಬಳಿಕ ವಿಡಿಯೋ ಬಿಡಿಗಡೆ ಮಾಡಿರುವ ಡಾ. ಮುರುಗೇಶ್, ಶಸ್ತ್ರಚಿಕಿತ್ಸೆ ವೇಳೆ ಶಿವಣ್ಣ ಆರೋಗ್ಯ ಸ್ಥಿರವಾಗಿತ್ತು. ಆಪರೇಷನ್ ನಂತರವೂ ಶಿವಣ್ಣ ನ ಹೆಲ್ತ್ ಪ್ಯಾರಾಮೀಟರ್ಸ್ ಚೆನ್ನಾಗಿದೆ.ಆದಷ್ಟು ಬೇಗ ಅವರು ಚೇತರಿಸಿಕೊಳ್ಳಲಿದ್ದಾರೆ. ಶಿವಣ್ಣ ಅವರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ನಿಮ್ಮೆಲ್ಲರ ಹಾರೈಕೆ ಸದಾ ಇರಲಿ ಎಂದು ತಿಳಿಸಿದ್ದಾರೆ.
ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆಯಲಿದ್ದಾರೆ.