ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತವೊಂದು ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಬೆಳಗ್ಗೆ ಎದ್ದು ಲೈಟ್ ಹಾಕಿದಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.