ಬೆಂಗಳೂರು : ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣನವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ದೇಶ ಸೇವೆಗಾಗಿ ಜೀವ… pic.twitter.com/e8GK9fGUgo
— CM of Karnataka (@CMofKarnataka) December 25, 2024
ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.