ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು, ಶಾಸಕ ಮುನಿರತ್ನ ಮೇಲೆ ಹಲ್ಲೆಯಾಗಿದೆ. ಗೂಂಡಾಗಳ ಮೂಲಕ ಹಲ್ಲೆ ಮಾಡಿಸಿದ್ದಾರೆ. ಇದು ಗೂಂಡಾ ರಾಜ್ಯವಾಗಲು ಬಿಡುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.