ಚಿತ್ರದುರ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ.
ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದ್ದು, ಅದರಂತೆ ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 32 ಅನುಮೋದನೆಯಾಗಿರುವ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ, ಸಾಮಾನ್ಯ) ನಿಯಮಗಳನುಸಾರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಸಂಬಂಧ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ದಾಖಲಾತಿಗಳ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಜಾಲತಾಣ https://chitradurga.nic.in ನಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಡಿ.20ರಂದು ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 2025ರ ಜನವರಿ 04 ರಂದು ಬೆಳಿಗ್ಗೆ 10.30 ಗಂಟೆಯಿಂದ 1:3 ಅನುಪಾತದಲ್ಲಿನ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮತ್ತು ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಜನವರಿ 15 ರಂದು ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಮತು ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ತಾತ್ಕಾಲಿಕ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಕುರಿತಂತೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ 2025ರ ಜನವರಿ 16 ರಿಂದ 23 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಜ.27ರಂದು ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಂಪರ್ಕಿಸಬಹುದು. ಆಕ್ಷೇಪಣೆಗಳನ್ನು ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಅಮೆರಿಕಕ್ಕೆ ಭಾರತೀಯರ ಕಳ್ಳಸಾಗಣೆ : ಕೆನಡಾದ 200ಕ್ಕೂ ಹೆಚ್ಚು ಕಾಲೇಜುಗಳ ಕುರಿತು ‘ED’ ತನಿಖೆ