ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದೆ. ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರ ಕಡೆಯಿಂದ ಇನ್ನೂ ನಮಗೆ ಯಾವುದೇ ದೂರು ಬಂದಿಲ್ಲ. ದೂರು ನೀಡಿದ ನಂತ್ರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ಘಟನೆ ನಡೆಯುವುದಕ್ಕೂ ಮುನ್ನಮೊದಲೇ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಸ್ಥಳದಲ್ಲಿ ಇದ್ದರು. ಕಾರಿನಲ್ಲಿ ಹೋಗುವಂತೆ ಶಾಸಕರಿಗೆ ಪೊಲೀಸರು ಸೂಚಿಸಿದ್ದರು. ಆದರೂ ಮುಖ್ಯ ರಸ್ತೆ ಹತ್ತಿರವಿದ್ದ ಕಾರಣ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಘಟನೆ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದರು.