ಬೆಂಗಳೂರು: ಗುತ್ತೆಗಾದರರಿಂದ ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ತನಿಖೆ ನಡೆಸುತ್ತಿರುವಂತ ಎಸ್ಐಟಿಯಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸ್ಪೀಕರ್ ಗೆ ಮನವಿ ಮಾಡಲಾಗಿದೆ.
ಕಸ ವಿಲೇವಾರಿ ಗುತ್ತಿಗೆ ನೀಡುವುದಕ್ಕೆ ಗುತ್ತಿಗೆದಾರ ಚಲುವರಾಜು ಬಳಿಯಲ್ಲಿ 30 ಲಕ್ಷ ವಂಚಕ್ಕೆ ಬೇಡಿಕೆ ಇಟ್ಟ ಸಂಬಂಧ ಭ್ರಷ್ಟಾಚಾರ ನಿಗ್ರಹದಡಿ ಕೇಸ್ ದಾಖಲಾಗಿತ್ತು. ಈ ಪ್ರಕಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಈಗ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂಕಷ್ಟ ಶುರುವಾಗಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆ ನಡೆಸಲು ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಪತ್ರ ಬರೆದಿದೆ. ಒಂದು ವೇಳೆ ಅನುಮತಿ ನೀಡಿದ್ರೇ, ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಲಿದೆ.
ಅಮೆರಿಕಕ್ಕೆ ಭಾರತೀಯರ ಕಳ್ಳಸಾಗಣೆ : ಕೆನಡಾದ 200ಕ್ಕೂ ಹೆಚ್ಚು ಕಾಲೇಜುಗಳ ಕುರಿತು ‘ED’ ತನಿಖೆ