ನವದೆಹಲಿ: ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ತಿರುವನಂತಪುರಂ ನಾರ್ತ್ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ.
ರೈಲು ಸಂಖ್ಯೆ 06569 ಎಸ್ಎಂವಿಟಿ ಬೆಂಗಳೂರು-ತಿರುವನಂತಪುರಂ ನಾರ್ತ್ ವಿಶೇಷ ಎಕ್ಸ್ ಪ್ರೆಸ್ ರೈಲು 27 ಡಿಸೆಂಬರ್ 2024 ರಂದು ಮಧ್ಯಾಹ್ನ 03.50 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 10.05ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ.
ರೈಲು ಸಂಖ್ಯೆ 06570 ತಿರುವನಂತಪುರಂ ನಾರ್ತ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಎಕ್ಸ್ ಪ್ರೆಸ್ ವಿಶೇಷ ರೈಲು 28 ಡಿಸೆಂಬರ್ 2024 ರಂದು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಮಧ್ಯಾಹ್ನ 12.35 ಕ್ಕೆ ಹೊರಟು, ಮರುದಿನ ಬೆಳಿಗ್ಗೆ 03.55 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.
ಎರಡೂ ಮಾರ್ಗಗಳಲ್ಲಿ ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸೇರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕರ, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ವಿಶೇಷ ರೈಲು ಒಂದು ಎ.ಸಿ. 2 ಟಯರ್ ಕೋಚ್, ಎರಡು ಎ.ಸಿ. 3 ಟಯರ್ ಕೋಚ್ ಗಳು, ಒಂಬತ್ತು ದ್ವಿತೀಯ ದರ್ಜೆ ಸ್ಲೀಪರ್ ಕೋಚ್ ಗಳು, ನಾಲ್ಕು ದ್ವಿತೀಯ ದರ್ಜೆ ಕೋಚ್ ಗಳು ಮತ್ತು ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ) ಕೋಚ್ ಗಳನ್ನು ಹೊಂದಿರಲಿದೆ.
ಈ ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ (www.enquiry.indianrail.gov.in) ಭೇಟಿ ನೀಡಿ, 139 ಸಂಖ್ಯೆಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್