ಬೆಂಗಳೂರು: ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ.
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ರೈಲು ಸಂಖ್ಯೆ 06520 ಕಲಬುರಗಿ – ಎಸ್ ಎಂ ವಿ ಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29 ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ಗಳಲ್ಲಿ ನಿಲುಗಡೆ ಇರಲಿದೆ.
ಈ ವಿಶೇಷ ರೈಲು ಮೂರು ಎಸಿ ತ್ರಿ ಟೈರ್ ಬೋಗಿಗಳು, ಮೂರು ದ್ವಿತೀಯ ದರ್ಜೆ ಸ್ಲೀಪರ್ ಕ್ಲಾಸ್ ಬೋಗಿಗಳು, ಒಂಬತ್ತು ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ) ಬೋಗಿಗಳನ್ನು ಹೊಂದಿರಲಿದೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.
BIG NEWS: ‘ನಟ ದರ್ಶನ್’ಗೆ ಬೆನ್ನು ಮೂಳೆ ಜರುಗಿದೆ: ಆಸ್ಪತ್ರೆಯ ವೈದ್ಯರ ಮೂಲಗಳ ಮಾಹಿತಿ | Actor Darshan
ಕಾಂಗ್ರೆಸ್ ಪಕ್ಷ ಯಾವಾಗಲೂ ಅಂಬೇಡ್ಕರ್ ವಿರೋಧಿಯಾಗಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಕಿಡಿ