ಬೆಂಗಳೂರು: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಕಾರಣ ಅಮೇರಿಕಾಕ್ಕೆ ಶಸ್ತ್ರ ಚಿಕಿತ್ಸೆಗೆ ತೆರಳಿದ್ದಾರೆ. ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇಂತಹ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್, ದೇವರ ಕೃಪೆಯಿಂದ ನನ್ನ ತ೦ದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ ಎಂದಿದ್ದಾರೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ ಎಂದು ಹೇಳಿದ್ದಾರೆ.
ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ ಎಂದು ಭಾವುಕವಾಗಿ ನುಡಿದಿದ್ದಾರೆ.
ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ. ಧನ್ಯವಾದಗಳು ಅಂತ ನಿವೇದಿತಾ ಶಿವರಾಜಕುಮಾರ್ ಹೇಳಿದ್ದಾರೆ.
It is the prayers and love of all the fans and our loved ones that have kept us going through tough times.
Thank you for your support!✨ pic.twitter.com/eaCF7lqybc— Niveditha Shivarajkumar (@NivedithaSrk) December 25, 2024
ಸಿ.ಡಿ ರವಿ ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ