ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಇಂತಹ ಆರೋಪಿಗಳಿಗೆ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ನೀಡಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಅವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ, ವಾಪಾಸ್ಸಾಗುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಹೀಗಾಗಿ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಯ ಸಂಬಂಧ ನಂದಿನಿ ಲೇಔಟ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದಂತ ಚಂದ್ರು, ವಿಶ್ವನಾಥ್ ಹಾಗೂ ಕೃಷ್ಣಮೂರ್ತಿ ಎಂಬುವರನ್ನು ಬಂಧಿಸಿದ್ದರು.
ಇಂದು ಬಂಧಿತ ಮೂವರು ಆರೋಪಿಗಳು 32ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
Taxpayers: ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್: 10.50 ಲಕ್ಷ ರೂ.ವರೆಗೆ ವಿನಾಯಿತಿ ಸಾಧ್ಯತೆ: ವರದಿ
BIG BREAKING: ಮಾಜಿ ಪ್ರಧಾನಿ ಮನಹೋನ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | Manmohan Singh