ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆಸ್ಪತ್ರೆಯ ಉನ್ನತ ಮೂಲಗಳ ಮಾಹಿತಿಯಂತೆ ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣದಿಂದ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ಗಣ್ಯರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಇನ್ನೂ ದೆಹಲಿಯ ಏಮ್ಸ್ ಆಸ್ಪತ್ರೆಯ ಉನ್ನತ ಮೂಲಗಳ ಮಾಹಿತಿಯಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಏಮ್ಸ್ ಆಸ್ಪತ್ರೆಯಿಂದ ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಸಚಿವ ಸ್ಥಾನಕ್ಕೆ ರಾಜೀನಾಮೆಗೆ ‘BJP ಆಗ್ರಹ’
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut