ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಇಂದಿನಿಂದ 7 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ 7 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಇನ್ನೂ ಸರ್ಕಾರಿ ಸಭೆ, ಸಮಾರಂಭಗಳನ್ನು ಶೋಕಾಚರಣೆ ಸಂದರ್ಭದಲ್ಲಿ ನಡೆಸುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.