ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಸರ್ಕಾರಿ ರಜೆಯನ್ನು ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ.
ಇಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಅಲ್ಲದೇ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.