ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ತಮ್ಮ 92 ನೇ ವಯಸ್ಸಿನಲ್ಲಿ ದೆಹಲಿ ಏಮ್ಸ್‌ನಲ್ಲಿ ನಿಧನರಾದರು. ವಯೋಸಹಜ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8:06ಕ್ಕೆ ಏಮ್ಸ್‌ಗೆ ದಾಖಲಿಸಲಾಗಿತ್ತು. ರಾತ್ರಿ 9:51ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಶುಕ್ರವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ. ನಾವು ಅಧಿಕೃತವಾಗಿ ಘೋಷಿಸುತ್ತೇವೆ. ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ದುರಂತದ ನಷ್ಟ ಎಂದು ಬಣ್ಣಿಸಿದ ಅವರು, ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಮತ್ತು ದೇಶದ ನಿಜವಾದ ಸಂಕೇತ ಎಂದು ಹೇಳಿದರು.