ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂಗಾರು ಮಳೆ ಮಾರುತಗಳ ಪ್ರಭಾವದಿಂದ ಮೂರು ದಿನಗಳಿಂದ ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣ ಉಂಟಾಗಿದ್ದು, ಕೆಲವಡೆ ತುಂತುರು ಮಳೆಯಾಗಿದೆ.
ಇಂದು ಮತ್ತು ನಾಳೆ ಬೆಂಗಳೂರು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.