ಬೆಂಗಳೂರು : ರಾಜ್ಯ ಪೊಲೀಸ್ ನೇಮಾಕಾತಿ ವಿಭಾಗವು 402 ಸಬ್ ಇನ್ ಸ್ಪೆಕ್ಟರ್ ನೇಮಕಾತಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಪೊಲೀಸ್ ನೇಮಕಾತಿ ವಿಭಾಗವು 2023ರ ಫೆ.1 ರ ಸುತ್ತೋಲೆ ಅನ್ವಯ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಯೂ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಯ ಅಂತಿಮ ತಿರ್ಪಿಗೆ ಒಳಪಟ್ಟಿರುತ್ತದೆ. ಹಾಗೆಯೇ 2020 ರ ಜು.6 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರುಗಳಿಯುವ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.