ತುಮಕೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಮಗಳ ಮೇಲೆಯೇ ಕಾಮುಕ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಬಳಿ ಈ ಘಟನೆ ನಡೆದಿದೆ. ಇಲ್ಲಿನ ಖಾಸಗಿ ಹೋಟೆಲ್ ಮಾಲೀಕನಾಗಿರುವ ಆರೋಪಿ ತನ್ನ ಪತ್ನಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಜೈಲಿಗೆ ಕಳುಹಿಸಲಾಗಿದೆ.