ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಂದಿನಿ ಲೇಔಟ್ ಠಾಣೆಯಲ್ಲಿ 100-150 ಜನ ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮೊಟ್ಟೆ ಎಸೆತ ಪ್ರಕರಣ ಸಂಬಂಧ ಶಾಸಕ ಮುನಿರತ್ನ ನೀಡಿರುವ ದೂರಿನಲ್ಲಿ, ಆರ್.ಆರ್. ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸು ಉಲ್ಲೇಖಿಸಲಾಗಿದೆ. ತಮ್ಮನ್ನು 100-150 ಜನರ ಮೂಲಕ ಹತ್ಯೆಗೆ ಕಾಂಗ್ರೆಸ್ ನಾಯಕರು ಸಂಚು ನಡೆಸಿದ್ದಾರೆ ಎಂದು ಅರೋಪಿಸಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದಿದ್ದರು. ಘಟನೆ ಬಳಿಕೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಶಾಸಕ ಮುನಿರತ್ನ ತಮ್ಮ ಮೇಲೆ ಆ್ಯಸಿಡ್ ಮೊಟ್ಟೆ ಎಸೆದು ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.