Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಪ್ರಧಾನಿ `ದಿ.ಮನಮೋಹನ್ ಸಿಂಗ್’ ಸಂತಾಪ ಸಭೆಯಲ್ಲಿ `CM ಸಿದ್ದರಾಮಯ್ಯ’ ಭಾಷಣದ ಹೈಲೈಟ್ಸ್ ಹೀಗಿದೆ.!
KARNATAKA

BREAKING : ಮಾಜಿ ಪ್ರಧಾನಿ `ದಿ.ಮನಮೋಹನ್ ಸಿಂಗ್’ ಸಂತಾಪ ಸಭೆಯಲ್ಲಿ `CM ಸಿದ್ದರಾಮಯ್ಯ’ ಭಾಷಣದ ಹೈಲೈಟ್ಸ್ ಹೀಗಿದೆ.!

By kannadanewsnow57

ಬೆಳಗಾವಿ : ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಸಿಎಂ ಮಾತುಗಳ ಹೈಲೈಟ್ಸ್…

*ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಢ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು.

ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು.

ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು.

ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದರು. RBI ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು.

ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು.

ಮನಮೋಹನ್ ಸಿಂಗ್ ಅವರಿಗಿಂತ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತ ಮಾಡಿರಲಿಲ್ಲ. ಇವರು ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು.

*ನಮ್ಮ ಸಂವಿಧಾನದ ಮೂಲಭೂತ ಆಶಯಗಳನ್ನು ಅಕ್ಷರಶಃ ಜಾರಿ ಮಡಿದರು.

ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು.

ಮನಮೋಹನ್ ಸಿಂಗ್ ಅವರ ಅಗಲಿಕೆ ಇಡೀ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಡವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು.

ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು. ಅತ್ಯಂತ ವಿನಯಶೀಲರಾಗಿದ್ದರು.

ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌.

BREAKING : ಮಾಜಿ ಪ್ರಧಾನಿ `ದಿ.ಮನಮೋಹನ್ ಸಿಂಗ್' ಅವರ ಸಂತಾಪ ಸಭೆಯಲ್ಲಿ `CM ಸಿದ್ದರಾಮಯ್ಯ' ಭಾಷಣದ ಹೈಲೈಟ್ಸ್ ಹೀಗಿದೆ.! BREAKING: HERE ARE THE HIGHLIGHTS OF CM SIDDARAMAIAH'S SPEECH AT THE CONDOLENCE MEETING OF FORMER PRIME MINISTER Manmohan Singh.
Share. Facebook Twitter LinkedIn WhatsApp Email

Related Posts

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

2 Mins Read

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

2 Mins Read

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

1 Min Read
Recent News

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

State News
KARNATAKA

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ…

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.