ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಆರ್ ಆರ್ ನಗರ ಪೊಲೊಲೀಸ್ ಠಾಣೆಯಲ್ಲಿ ಕನ್ನಡದ ಮುದ್ದುಲಕ್ಷಅಮೀ ಸೀರಿಯಲ್ ನಟ ಚರಿತ್ ಬಾಳಪ್ಪ ಅವರ ವಿರುದ್ಧ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಸಂಬಂಧ ದೂರು ನೀಡಿದ ಕಾರಣ, ನಟ ಚರಿತ್ ಬಾಳಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನೂ ಪರಿಚಯದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣದ ದಾಖಲಾದ ನಂತ್ರ, ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚರಿತ್ ಬಾಳಪ್ಪ ಅವರು ಕನ್ನಡದ ಮುದ್ದುಲಕ್ಷ್ಮೀ ಸೀರಿಯಲ್ ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ತೆಲುಗಿನ ಕಿರುತೆರೆಯಲ್ಲೂ ನಟಿಸಿದ್ದಾರೆ.
ಅಂದಹಾಗೇ ಯುವತಿ ನೀಡಿರುವಂತ ದೂರಿನಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಕೊಲೆ ಬೆದರಿಕೆ ಹಾಕಿ, ಹಲ್ಲೆಗೂ ಯತ್ನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ಅಂಗೀಕರಿಸಲಾದ ಪ್ರಮುಖ ಕಾನೂನುಗಳಿವು | RIP Manmohan Singh
BREAKING:’ಸುಜುಕಿ ಮೋಟಾರ್’ ಕಂಪನಿಯ ಮಾಜಿ ಅಧ್ಯಕ್ಷ ಒಸಾಮು ಸುಜುಕಿ ನಿಧನ