ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ದೂರು ನೀಡಿದರೂ ಪ್ರಕರಣ ದಾಖಲಿಸದೇ ಕರ್ತವ್ಯ ಲೋಪ ಎಸಗಿದಂತ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಜೀವ ಬೆದರಿಕೆ ಆರೋಪ ಮಾಡಿ, ಗುತ್ತಿಗೆದಾರ ಸಚಿನ್ ಎಂಬುವರು ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಘಟನೆ ನಂತ್ರ ಗಾಬರಿಯಿಂದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೇ ಹೀಗೆ ದೂರು ನೀಡಿದ್ದರೂ ಗಾಂಧಿ ಗಂಜ್ ಠಾಣೆಯ ಪೊಲೀಸರು ಮಾತ್ರ ಕೇಸ್ ದಾಖಲಿಸದೇ ಕರ್ತವ್ಯ ಲೋಪ ಎಸಗಿದ್ದರು.
ಈ ಹಿನ್ನಲೆಯಲ್ಲಿ ಬೀದರ್ ನ ಗಾಂಧಿ ಗಂಜ್ ಪೊಲೀಸ್ ಠಾಣೆಯ ರಾಜೇಶ್ ಚೆಲ್ವಾ ಹಾಗೂ ಶಾಮಲಾ ಎಂಬುವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.
BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ
BREAKING: 26/11ರ ಮುಂಬೈ ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ನಿಧನ