ತುಮಕೂರು: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಸ್ವಾಗತ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ತುಮಕೂರಿನ ರಾಷ್ಟ್ರೀಯ ಹೆದ್ದಾರಿ 75ರ ತಾಲ್ಲೂಕಿನ ಅಂಚೆಪಾಳ್ಯ ಇಂದು ಬೆಳಗಿನ ಜಾವ ರಸ್ತೆಯಲ್ಲಿನ ಸ್ವಾಗತ ನಾಮಫಲಕಕ್ಕೆ ಬಸ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಂಗಳೂರಿನ ಬಿಸಿ ರೋಡ್ ನಿವಾಸಿ ಚಾಲಕ ಮೊಹಮ್ಮದ್ ಇಬ್ರಾಹಿಂ(40) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಂದಹಾಗೇ ಖಾಸಗಿ ಬಸ್ ಉಡುಪಿಯ ಸುಭಾಷ್ ನಗರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರೇ, ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.
Rain In Karnataka: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್: ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ