ನವದೆಹಲಿ: ಪಂಜಾಬ್ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡ ಎಂಟು ಜನರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ
ಇದಲ್ಲದೆ, ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಘೋಷಿಸಿದರು. “ಪಂಜಾಬ್ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ.ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂದು ಪ್ರಧಾನಿ ಕಚೇರಿ ಎಕ್ಸ್ (ಈ ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದೆ.
ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಚಲಿಸುತ್ತಿದ್ದ ಬಸ್ ಅಪಘಾತಕ್ಕೀಡಾದ ಪರಿಣಾಮ 2 ವರ್ಷದ ಬಾಲಕಿ ಸೇರಿದಂತೆ ಎಂಟು ಜನರು ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟ ಎಂಟು ಮಂದಿಯಲ್ಲಿ ಐವರನ್ನು ಗುರುತಿಸಲಾಗಿದ್ದು, ಮೂವರನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಬಟಿಂಡಾದ ಉಪ ಆಯುಕ್ತ ಶೌಕತ್ ಅಹ್ಮದ್ ಪರೇ ತಿಳಿಸಿದ್ದಾರೆ.