ನವದೆಹಲಿ: ಡಿ.26ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ದೆಹಲಿಯ AICC ಕಚೇರಿಗೆ ಶಿಫ್ಟ್ ಮಾಡಲಾಗಿದೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಇದೀಗ ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕೊಂಡೊಯ್ಯಲಾಗಿದೆ. ಇಂದು ಬೆಳಿಗ್ಗೆ 9.30 ರವರೆಗೆ ಸಾರ್ವಜನಿಕರಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಗೌರವ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆಯನ್ನು ಇಂದು ಬೆಳಿಗ್ಗೆ 9.30ಕ್ಕೆ ಎಐಸಿಸಿ ಪ್ರಧಾನ ಕಚೇರಿಯಿಂದ ಸ್ಮಶಾನಕ್ಕೆ ಪ್ರಾರಂಭವಾಗಲಿದೆ. ಆ ಬಳಿಕ ಬೆಳಿಗ್ಗೆ 11.45ಕ್ಕೆ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ.
Rain In Karnataka: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್: ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ