ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ.
16. ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.
ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.
ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.
ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.
ಜಿ) ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.
17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‌ಸೈಟ್‌ನಲ್ಲಿ/ಟ್ರಸ್ಟ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್ ಮಾಡಲಾಗುವುದು.
18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.