Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM

‘ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ ಕಾಮಗಾರಿಯನ್ನು ‘ದೇವರ ಸೇವೆ’ಯೆಂದು ಭಾವಿಸಿ: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯ ಸರ್ಕಾರದ ರಾಜಕೀಯ ಹಸ್ತಕ್ಷೇಪದಿಂದ ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ್ ಆಕ್ರೋಶ
KARNATAKA

ಸಿಎಂ ಸಿದ್ದರಾಮಯ್ಯ ಸರ್ಕಾರದ ರಾಜಕೀಯ ಹಸ್ತಕ್ಷೇಪದಿಂದ ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ್ ಆಕ್ರೋಶ

By kannadanewsnow0930/12/2024 4:14 PM

ಬೆಂಗಳೂರು: ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್‌ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡುಬಂದಿತ್ತು. ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಅದರಲ್ಲೂ ಎಡವಟ್ಟುಗಳ ಮೇಲೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಭಾಷಾಂತರದಲ್ಲಿ ಲೋಪ, ಒಎಂಆರ್‌ ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ, ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರು ಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ದೂರಿದ್ದಾರೆ.

ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.10 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆಗಸ್ಟ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52 ರಷ್ಟಿದ್ದ ಹಾಜರಾತಿ, ಮರುಪರೀಕ್ಷೆಯಲ್ಲಿ ಶೇ.47.7 ಕ್ಕೆ ಕುಸಿದಿದೆ. ಅಂದರೆ ಅಭ್ಯರ್ಥಿಗಳು ಕಾಂಗ್ರೆಸ್‌ ಸರ್ಕಾರ ಹಾಗೂ ಕೆಪಿಎಸ್‌ಸಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ

ಸಿಎಂ ಸಿದ್ದರಾಮಯ್ಯನವರ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೇ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಎಡವಟ್ಟಿಗೆ ಕಾರಣ. ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂ. ವೆಚ್ಚವಾಗಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂ. ಪರೀಕ್ಷಾ ಗೋಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಸಾರ್ವಜನಿಕರ ತೆರಿಗೆ ಹಣವನ್ನ ಹೀಗೆ ಪೋಲು ಮಾಡುವುದು ಯಾವ ನ್ಯಾಯ? ಒಂದಲ್ಲ, ಹತ್ತು ಬಾರಿ ಮರುಪರೀಕ್ಷೆ ನಡೆಸಿದರೂ ಈ ಎಡವಟ್ಟು ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾಗಿ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲ ಎನ್ನುವ ಅಭಿಪ್ರಾಯ ಅಭ್ಯರ್ಥಿಗಳಲ್ಲಿ ಈಗಾಗಲೇ ಮೂಡಿದೆ. ಆದ್ದರಿಂದಲೇ ಹಾಜರಾತಿ ಗಣನೀಯವಾಗಿ ಕುಸಿದಿದೆ ಎಂದು ಅವರು ದೂರಿದ್ದಾರೆ.

ಕ್ರಮ ಕೈಗೊಂಡಿಲ್ಲ

ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಎಡವಟ್ಟುಗಳಿಗೆ, ಲೋಪ ದೋಷಗಳಿಗೆ ಕಾರಣರಾದ ಪರೀಕ್ಷಾ ನಿಯಂತ್ರಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಕಾರ್ಯದರ್ಶಿಗಳನ್ನು ಮಾತ್ರ ಎತ್ತಂಗಡಿ ಮಾಡಲಾಗಿದೆ. ಕೆಪಿಎಸ್‌ಸಿ ಈ ರೀತಿ ನಂಬಿಕೆ ಕಳೆದುಕೊಂಡು, ಹೆಸರು ಕೆಡಿಸಿಕೊಂಡರೆ ಉತ್ತಮ ಅಭ್ಯರ್ಥಿಗಳನ್ನು, ಪ್ರತಿಭಾವಂತ ಯುವಜನರನ್ನು ಸರ್ಕಾರಿ ಸೇವೆಯತ್ತ ಆಕರ್ಷಿಸುವುದು ಹೇಗೆ ಸಾಧ್ಯ? ಆಡಳಿತಕ್ಕೆ ಹೊಸ ರಕ್ತ ಬರದಿದ್ದರೆ ಆಡಳಿತವನ್ನು ಚುರುಕುಗೊಳಿಸುವುದು ಹೇಗೆ? ಯುವ ಜನಾಂಗ ಸಾರ್ವಜನಿಕ ಸೇವೆಗೆ ಬರದಿದ್ದರೆ ಆಡಳಿತಕ್ಕೆ ಹೊಸ ಚೈತನ್ಯ ತುಂಬಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

16 ಸದಸ್ಯರಿರುವ ಕೆಪಿಎಸ್‌ಸಿ ದೇಶದಲ್ಲೇ ದೊಡ್ಡ ಆಯೋಗವಾಗಿದೆ. ಅವರ ಸಂಬಳ, ಸಾರಿಗೆಗೆಂದು ಸರ್ಕಾರ ಕೋಟ್ಯಂತರ ರೂಪಾಯಿ ತೆರಿಗೆ ಹಣ ವ್ಯಯ ಮಾಡುತ್ತದೆ. ಇಷ್ಟಾದರೂ ಒಂದು ಗೊಂದಲಮುಕ್ತ ಪೂರ್ವಭಾವಿ ಪರೀಕ್ಷೆ ನಡೆಸಲು ವಿಫವಾಗುತ್ತದೆ ಎಂದರೆ ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲೇಬೇಕು. ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಹಣ, ಸಮಯ ಸಮರ್ಪಿಸುತ್ತಾರೆ. ಅನೇಕರು ತಮ್ಮ ಭವಿಷ್ಯವನ್ನೇ ಪಣಕ್ಕಿಟ್ಟು ತಯಾರಿ ನಡೆಸುತ್ತಾರೆ. ಅನೇಕ ಬಡ ಅಭ್ಯರ್ಥಿಗಳು ಸಾಲ ಮಾಡಿ ಕೋಚಿಂಗ್ ಪಡೆಯುತ್ತಾರೆ. ಇಷ್ಟೆಲ್ಲಾ ತನು-ಮನ-ಧನ ಧಾರೆ ಎರೆದು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಈ ರೀತಿ ಗೊಂದಲವಾಗುತ್ತಿದ್ದರೆ ಸರ್ಕಾರ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಆಡಳಿತದ ಹಿತದೃಷ್ಟಿಯಿಂದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ. ಕೆಪಿಎಸ್ಸಿಯಲ್ಲಿ ಆಮೂಲಾಗ್ರ ಸುಧಾರಣೆ ತರುವ ಮೂಲಕ ಇಡೀ ನೇಮಕಾತಿ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.

BIGG NEWS : 2025 ನೇ ಸಾಲಿನ ರಾಜ್ಯ `ಸಾರ್ವತ್ರಿಕ ರಜೆ’ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

SHOCKING : ಚಳಿಗೆ ಹೊಗೆ ಹಾಕಿ ಮಲಗಿದಾಗಲೇ ದುರಂತ : ಉಸಿರುಗಟ್ಟಿ ದಂಪತಿ ಸಾವು.!

Share. Facebook Twitter LinkedIn WhatsApp Email

Related Posts

‘ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ ಕಾಮಗಾರಿಯನ್ನು ‘ದೇವರ ಸೇವೆ’ಯೆಂದು ಭಾವಿಸಿ: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM3 Mins Read

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM2 Mins Read

ನಾಳೆ ಬೆಂಗಳೂರು ಗ್ರಾಮಾಂತರ ಭಾಗದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

01/07/2025 8:45 PM1 Min Read
Recent News

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM

‘ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ ಕಾಮಗಾರಿಯನ್ನು ‘ದೇವರ ಸೇವೆ’ಯೆಂದು ಭಾವಿಸಿ: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM
State News
KARNATAKA

‘ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ ಕಾಮಗಾರಿಯನ್ನು ‘ದೇವರ ಸೇವೆ’ಯೆಂದು ಭಾವಿಸಿ: ಸಚಿವ ರಾಮಲಿಂಗಾರೆಡ್ಡಿ

By kannadanewsnow0901/07/2025 9:32 PM KARNATAKA 3 Mins Read

ದಕ್ಷಿಣ ಕನ್ನಡ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಮಂಜೂರಾತಿ ಹಾಗೂ ಈ ಕೆಳಕಂಡ…

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM

ನಾಳೆ ಬೆಂಗಳೂರು ಗ್ರಾಮಾಂತರ ಭಾಗದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

01/07/2025 8:45 PM

ನಿಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸಲು ಒಮ್ಮೆ ಈ ಪ್ರಯತ್ನ ಮಾಡಿ

01/07/2025 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.