Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆ ಸಭೆಯ ಪ್ರಮುಖ ಹೈಲೈಟ್ಸ್
KARNATAKA

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0907/01/2025 7:13 PM

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ಸಭೆ ನಡೆಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳು ಮುಂದಿದೆ ಓದಿ.

• ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ.

• ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ.

• ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.

• ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್‌ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು.

• ಔಷಧಿ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

• ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು.

• ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು.

• ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ.

• ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ಚಿಕಿತ್ಸಾ ಪ್ಯಾಕೇಜ್‌ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು.

• ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮಗ್ರ ಸುಧಾರಣೆಯಾಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಖಾತ್ರಿಪಡಿಸಿದರೆ ಮಾತ್ರ ಜನರ ಖಾಸಗಿ ಆಸ್ಪತ್ರೆಗಳ ಅವಲಂಬನೆ ಕಡಿಮೆ ಮಾಡಬಹುದು.

• ಹೆಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಇದು ಪ್ರಾಣಾಂತಿಕವಲ್ಲ. ಇದನ್ನು ಪರೀಕ್ಷೆ ಮಾಡುವ ಅಗತ್ಯವಿರುವುದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೆ ವೈದ್ಯಕೀಯ ಇಲಾಖೆಯ ಅಧಿಕಾರಿಗಳು ಗಮನಕ್ಕೆ ತಂದರು.

ವೈದ್ಯಕೀಯ ಪದವಿ ಇಲ್ಲದೇ ವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ರೂ.ದಂಡ, ಒಬ್ಬರ ವಿರುದ್ದ FIR ದಾಖಲು

UPDATE : ತೀವ್ರ ಭೂಕಂಪಕ್ಕೆ ‘ಟಿಬೆಟ್’ ತತ್ತರ ; ಮೃತರ ಸಂಖ್ಯೆ 95ಕ್ಕೆ ಏರಿಕೆ |Earthquake

Share. Facebook Twitter LinkedIn WhatsApp Email

Related Posts

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM2 Mins Read
Recent News
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

AI ಜೊತೆ ಶೃಂಗಾರ : ಅಶ್ಲೀಲತೆಗೆ ದಾಸರಾಗುತ್ತಿದ್ದಾರೆ ಯುವ ಜನತೆ : ಸಮೀಕ್ಷೆಯಲ್ಲಿ ಅಘಾತಕಾರಿ ಮಾಹಿತಿ ಬಹಿರಂಗ !

12/03/2026 9:19 PM
State News
vidhana soudha KARNATAKA

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

By kannadanewsnow0912/03/2026 9:32 PM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಉತ್ತಮ ನಡತೆ ತೋರಿದ ಒಟ್ಟು 31 ಜೀವಾವಧಿ ಶಿಕ್ಷಾ ಬಂದಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ…

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

AI ಜೊತೆ ಶೃಂಗಾರ : ಅಶ್ಲೀಲತೆಗೆ ದಾಸರಾಗುತ್ತಿದ್ದಾರೆ ಯುವ ಜನತೆ : ಸಮೀಕ್ಷೆಯಲ್ಲಿ ಅಘಾತಕಾರಿ ಮಾಹಿತಿ ಬಹಿರಂಗ !

12/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.